ಉಡುಪಿ: ರವಿವಾರ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.