ಬೆಂಗಳೂರು: ನಿನ್ನೆ ಕೆಇಎ ಪರಿಕ್ಷೆಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ವಸ್ತ್ರ ಸಂಹಿತೆಯಲ್ಲಿ ಹಿಜಾಬ್ ಧರಿಸುವುದನ್ನು ಕೂಡಾ ನಿಷೇಧಿಸಲಾಗಿದೆಯೆಂದು ವರದಿಯಾಗಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಹಿಜಾಬ್ ಧರಿಸಲು ಯಾವುದೇ ಆಕ್ಷೇಪ ಇಲ್ಲ ಎಂದು ತಿಳಿಸಿದ್ದಾರೆ.
ಕೆಇಎಯ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕಾರಣಿಗಳಿಂದ ಟೀಕೆಗೆ ಗುರಿಯಾಗಿತ್ತು.
ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್, ”ಹಿಜಾಬ್ ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಹೇಳಿದ್ದಾರೆ.