ಬೆಂಗಳೂರು: ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಆರ್.ಆರ್.ನಗರ ಠಾಣೆ ಪೊಲೀಸರು ನಟ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಅವರು ಹಾಜರಾದರು.
ದರ್ಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಮೂರು ದಿನದೊಳಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಿದ್ದರು. ಆದರೆ ದರ್ಶನ್ ಹಾಜರಾಗಿರಲಿಲ್ಲ. ಬಳಿಕ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದು ಇಂದು ಹಾಜರಾದರು.