ಬೆಂಗಳೂರು: ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. ಈ ಹಿಂದೆ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರು ನಾವು. ಆ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿ. ಆದರೆ ಈಗ ಸರ್ಕಾರ ಬೀಳಿಸಿದವರ ಜೊತೆಗೆ ಅವರು ನೆಂಟಸ್ಥನ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅವರು ಹೇಳುತ್ತಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಎನ್ನುತ್ತಾರೆ. ಎಂತಹ ಮಾತುಗಳನ್ನಾಡುತ್ತಾರೆ? ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಎಂದು ಡಿಸಿಎಂ ಕೇಳಿದರು.
ಹಿಂದಿನ ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ ಎಂದು ಕೂಡ ಇದೇ ಸಂದರ್ಭ ಡಿಕೆ ಶಿವಕುಮಾರ್ ಹೇಳಿದರು.