ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ. ಇಂದು ಹೂಗುಚ್ಛ ನೀಡುವುದರ ಮೂಲಕ ಉಡುಪಿ ಕಾಂಗ್ರೆಸ್ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ ಉಪಸ್ಥಿತರಿದ್ದರು.