ಕಾರಿಗೆ ಟ್ರಕ್ ಡಿಕ್ಕಿ; ಮದುವೆ ಮುಗಿಸಿ ವಾಪಸಾಗುತ್ತಿದ್ದ ಐವರು ಮೃತ್ಯು

Prasthutha|

ಕೊಯಮತ್ತೂರು: ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಸಂಭವಿಸಿದೆ.

- Advertisement -


ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ.


ಇವರೆಲ್ಲರೂ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್‌ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp