ಠೇವಣಿ ಕಳೆದುಕೊಂಡ ಬಿಜೆಪಿ ಅಭ್ಯರ್ಥಿ ವಿಪಕ್ಷ ನಾಯಕ: ಕಾಂಗ್ರೆಸ್​ ವ್ಯಂಗ್ಯ

Prasthutha|

ಬೆಂಗಳೂರು: ಕೊನೆಗೂ ಬಿಜೆಪಿ ವಿರೋಧ ಪಕ್ಷ ನಾಯಕ ಆಯ್ಕೆಯಾಗಿದ್ದು, ಕಾಂಗ್ರೆಸ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದೆ. ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -

X ಖಾತೆಯಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು, ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -

ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ ಅಥವಾ ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕಾಂಗ್ರೆಸ್​ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.



Join Whatsapp