ಇಂದು ಒನ್‌ಡೇ ವರ್ಲ್ಡ್‌ಕಪ್ ಫೈನಲ್: ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ

Prasthutha|

- Advertisement -

ಬೆಂಗಳೂರು: ವಿಶ್ವವೇ ಕಾತುರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯ ಇಂದು ನಡೆಯುತ್ತಿದ್ದು, ಭಾರತ ಮತ್ತು ಆಷ್ಟ್ರೇಲಿಯಾ ತಂಡಗಳು ಸೆಣಸಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ರೋಮಾಂಚಕಾರಿ ಈ ಪಂದ್ಯವನ್ನು ವೀಕ್ಷಿಸಲು ಸಿದ್ದರಾಮಯ್ಯ ಸರಕಾರ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿರುವುದಾಗಿ ತಿಳಿಸಿದೆ.

ಸ್ವತಃ ಸಿಎಂ ಸಿದ್ದರಾಮಯ್ಯರೇ X ಪೋಸ್ಟ್ ಮಾಡಿ, ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು‌ ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ. ಜೊತೆಗೆ ಟೀಮ್ ಇಂಡಿಯಾ ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.

- Advertisement -

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ‌ ಬಗ್ಗೆ ಆದೇಶ ಹೊರಡಿಸಿದ್ದು ಜೊತೆಗೆ ಈ ಸಂದರ್ಭದಲ್ಲಿ ಸೂಕ್ತವಾದ ಭದ್ರತೆಯನ್ನು ಕೂಡ ಕಲ್ಪಿಸಲು ಸೂಚಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೊಡ್ಡ ಸ್ಕ್ರೀನ್‌ಗಳನ್ನು ಅಳವಡಿಸಿ, ಫೈನಲ್ ಪಂದ್ಯಾವಳಿಯನ್ನು ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ MC & A ಇವರ ಸಹಯೋಗದೊಂದಿಗೆ ನೇರ ಪ್ರಸಾರ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಮಧ್ಯಾಹ್ನ 1.30ರಿಂದ ಮುಕ್ತಾಯವಾಗುವವರೆಗೆ ದೊಡ್ಡ ಎಲ್.ಇ.ಡಿ. ಸ್ಕ್ರೀನ್‌ಗಳನ್ನು ಅಳವಡಿಸಿ, ನೇರ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದೆ.




Join Whatsapp