ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನವು ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್4ರಿಂದ 14ರವರೆಗೆ ಅಧಿವೇಶನ ನಡೆಯಲಿದ್ದು, ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡುತ್ತಾ, ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿರುವ ಹಿನ್ನೆಲೆ 3,500 ಪೊಲೀಸ್ ಸಿಬ್ಬಂದಿಯನ್ನು ಸುವರ್ಣಸೌಧದ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಬಿಗಿ ಭದ್ರತೆ ಮಾಡಿಕೊಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಎಂದಿದ್ದಾರೆ.
ತಯಾರಿಯ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.