ಪರಶುರಾಮ್‌ ಥೀಮ್‌ ಪಾರ್ಕ್‌ ಹಗರಣ: ತನಿಖೆಗೆ ಸಿದ್ದರಾಮಯ್ಯ ಆದೇಶ

Prasthutha|

ಉಡುಪಿ: ಪರಶುರಾಮ್ ಥೀಂ ಪಾರ್ಕ್ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶ ನೀಡಿದ್ದಾರೆ. ಈ ಬಗ್ಗೆ ಸಮಗ್ರ ನಡೆಸುವಂತೆ ಅವರು ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

- Advertisement -

ಈ ಕುರಿತು ವಿವರಗಳನ್ನು ನೀಡಿದ MLC ಮಂಜುನಾಥ್ ಭಂಡಾರಿ, ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸಿ ತಾಣವೋ ಎಂಬ ಗೊಂದಲವಿದೆ. ಸಿಎಂ ಆಗಿದ್ದ ಬೊಮ್ಮಾಯಿ ಬಂದು ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಗಮನಕ್ಕೆ ಬಂದಿದೆ. ಅವರು ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಪರಶುರಾಮ್ ಪ್ರತಿಮೆಯ ಸೊಂಟದ ಮೇಲಿನ ಭಾಗವು ಕಾಣೆಯಾಗಿದೆ. ಅಧಿಕಾರಿಗಳನ್ನು ಕೇಳಿದಾಗ ವಿನ್ಯಾಸ ಬದಲಾವಣೆಗೆ ಕಳುಹಿಸಲಾಗಿದೆ ಎನ್ನುತ್ತಾರೆ. ಆದರೆ ಈ ಸ್ಥಳವು ಗೋಮಾಳ ಭೂಮಿಯಾಗಿದೆ. ಅಲ್ಲಿ ಪಾರ್ಕ್ ನಿರ್ಮಿಸದಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು ಎಂದು ಭಂಡಾರಿ ಮಾಹಿತಿ ನೀಡಿದರು.

ಒಮ್ಮೆ ಮುಖ್ಯಮಂತ್ರಿ ಪ್ರತಿಮೆ ಉದ್ಘಾಟಿಸಿದ ಬಳಿಕ ಜಿಲ್ಲಾಧಿಕಾರಿ ಅನುಮತಿ ಪಡೆಯದೆ ಅದನ್ನು ಸ್ಥಳಾಂತರ ಮಾಡಲಾಗಿದೆ ಎಂದರೆ ಏನರ್ಥ? ಇದೀಗ ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಪ್ರತಿಮೆ ಉದ್ಘಾಟನೆ ವೇಳೆ ಅದರ ಸೊಂಟದ ಮೇಲ್ಭಾಗದಲ್ಲಿ ಏನಿತ್ತು ಎಂಬ ಸತ್ಯ ಹೊರಬರಬೇಕಾಗಿದೆ. ಧಾರ್ಮಿಕ ಕೇಂದ್ರವೋ ಅಥವಾ ಪ್ರವಾಸಿ ತಾಣವೋ ಎಂಬುದನ್ನು ಅವರೇ ಸ್ಪಷ್ಟಪಡಿಸಲಿ ಎಂದು ಹೇಳಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್‌ಕುಮಾರ್, ಅಂದಿನ ಮುಖ್ಯಮಂತ್ರಿಗಳು ಈ ಪಾರ್ಕ್ ಉದ್ಘಾಟನೆಗೂ ಮುನ್ನ ಸೂಕ್ತ ಮಾಹಿತಿ ಪಡೆಯಬೇಕಿತ್ತು ಎಂದರು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪರಶುರಾಮನಿಗೆ ಅವಮಾನ ಮಾಡಿದೆ. ತರಾತುರಿಯಲ್ಲಿ ಪ್ರತಿಮೆಯನ್ನು ಏಕೆ ನಿರ್ಮಿಸಲಾಗಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದರು.



Join Whatsapp