►ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ.
ಹೆಚ್ ಡಿಕೆಯ ಹೇಳಿಕೆಗೆ ಕೆರಳಿದ ಕಾರ್ಯಕರ್ತರು ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ.
ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ಗೋಡೆಗಳ ಮೇಲೆ ಅಂಟಿಸಲಾಗಿದ್ದ ಪೋಸ್ಟರ್ಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಪೋಸ್ಟರ್ನಲ್ಲಿ ಏನಿದೆ?
ಕರೆಂಟ್ ಕಳ್ಳ ಖ್ಯಾತಿಯ ಹೆಚ್ಡಿಕೆ ನಿರ್ಮಾಣದ ಚಿತ್ರ “ಪೆನ್ ಡ್ರೈವ್ ಬ್ರದರ್”. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ಬರೀ ಟೀಸರ್ ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68000 ಎಂದು ಪೋಸ್ಟರ್ನಲ್ಲಿ ವ್ಯಂಗ್ಯವಾಡಲಾಗಿದೆ.