ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶೇ. 4 ರಷ್ಟು ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ: ಅಮಿತ್ ಶಾ

Prasthutha|

ಜಗ್ತಿಯಾಲ್: ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶೇ. 4 ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಹೇಳಿದ್ದಾರೆ.

- Advertisement -


ತೆಲಂಗಾಣದ ಜಗ್ತಿಯಾಲ್ ನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ಸರ್ಕಾರ ರಚನೆಯಾದ ತಕ್ಷಣ ನಾವು 4% ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಎಸ್ ಸಿ, ಎಸ್ ಟಿ ಮತ್ತು ಒಬಿಸಿಗೆ ಹಂಚುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.



Join Whatsapp