ಚಿಕ್ಕಮಗಳೂರು: ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮನೆಯಲ್ಲಿ ಸಂಬಂಧಿಕರು ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಯಾರಿಸಿದ್ದ ಮಾಂಸಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.