ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ನಾನು ಒಬ್ಬನೆ: ಕುಮಾರಸ್ವಾಮಿ

Prasthutha|

ರಾಮನಗರ: ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ, ಏನೂ ಮಾಡಲು ಆಗಲ್ಲ. ನನಗೆ ಯಾರು ಏನೂ ಮಾಡೋಕಾಗಲ್ಲ. ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.

ಬರದ ವಿಚಾರವಾಗಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.




Join Whatsapp