ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -


ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ ಅವರು, ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ತಿಳಿಸಿದರು.




Join Whatsapp