ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನ: ಆರ್. ಅಶೋಕ್

Prasthutha|

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕರನ್ನು ದುಬೈ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಹಿಂದೆ ಬೆಳಗಾವಿ ರಾಜಕಾರಣದಿಂದ ಸರ್ಕಾರವೇ ಬಿದ್ದು ಹೋಗಿತ್ತು. ಮತ್ತೆ ಬೆಳಗಾವಿ ಬೆಂಕಿ ಜ್ವಾಲೆಯಾಗಿ ದುಬೈವರೆಗೆ ಹೋಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಮನೆಗೆ ಹೋದರೂ ಶಾಸಕರನ್ನು ಸತೀಶ್ ಜಾರಕಿಹೊಳಿ ಕರೆದುಕೊಂಡು ಹೋಗಿದ್ದಾರೆ. ಲೋಕಸಭಾ ಚುನಾವಣೆ ನಂತರ ಸರ್ಕಾರ ಇರೋದಿಲ್ಲ. ಕಾಂಗ್ರೆಸ್​​ನ ಅವನತಿಗೆ ಇದೆಲ್ಲವೂ ಕಾರಣ. ರಾಜ್ಯದಲ್ಲಿ ಒಬ್ಬರು ಅಲ್ಲ, ಮೂವರು ಸಿಎಂ ಗಳಿದ್ದಾರೆ ಮುಂದೆ ಅವರು ಯಾವ ಯಾವ ದಿಕ್ಕಿನಲ್ಲಿ ಹೋಗ್ತಾರೋ ನೋಡೋಣ ಎಂದು ಹೇಳಿದರು.




Join Whatsapp