ವಿದ್ಯುತ್ ತಗುಲಿ ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್

Prasthutha|

ನವದೆಹಲಿ: ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ.

- Advertisement -


ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಎಚ್‌ಆರ್‌ಸಿ, ಘಟನೆ ಬಗ್ಗೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ. ಈ ಘಟನೆಯು ಬೆಂಗಳೂರಿನ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.




Join Whatsapp