ಗಾಝಾದ 3 ಆಸ್ಪತ್ರೆಗಳ ರೋಗಿಗಳ ಸ್ಥಳಾಂತರಕ್ಕೆ ಸಿದ್ಧತೆ: ವಿಶ್ವ ಆರೋಗ್ಯ ಸಂಸ್ಥೆ

Prasthutha|

ಜಿನೆವಾ: ಗಾಝಾದಲ್ಲಿನ ಮೂರು ಆಸ್ಪತ್ರೆಗಳು ತಮ್ಮಲ್ಲಿರುವ ರೋಗಿಗಳ ಸ್ಥಳಾಂತರ ಕಾರ್ಯದಲ್ಲಿ ನೆರವಾಗುವಂತೆ ಕೋರಿಕೆ ಸಲ್ಲಿಸಿದ್ದು, ಈ ಕುರಿತ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರರು ಹೇಳಿದ್ದಾರೆ.

- Advertisement -

ಜಿನೆವಾದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತಾಡಿದ ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರ ಕ್ರಿಶ್ಚಿಯನ್ ಲಿಂಡ್ಮಿಯರ್, ಉತ್ತರ ಗಾಝಾದಲ್ಲಿನ ಎಲ್ಲಾ ಆಸ್ಪತ್ರೆಗಳೂ ದಾಲಿಯಿಂದ ಬಾಧಿಸಲ್ಪಟ್ಟಿವೆ. ಅವು ಸಹಜವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ. ಆದರೂ ಸ್ಥಳಾಂತರಿಸಲು ಸಾಧ್ಯವಾಗದ ಕೆಲವು ರೋಗಿಗಳು ಈಗಲೂ ಅಲ್-ಶಿಫಾ, ಇಂಡೊನೇಶ್ಯನ್ ಆಸ್ಪತ್ರೆ ಮತ್ತು ಅಲ್‌ಅಹಿಲ್ ಆಸ್ಪತ್ರೆಗಳಲ್ಲಿದ್ದಾರೆ. ಈಗ ಅವರನ್ನು ಅಲ್ಲಿಂದ ಬೆರೆ ಕಡೆಗೆ ಸಿಪ್ಟ್ ಮಾಡದೇ ಬೇರೆ ಮಾರ್ಗವಿಲ್ಲ. ಇದಕ್ಕೆ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.




Join Whatsapp