ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.
ಒಡಿಶಾದ ಪ್ರಸಿದ್ಧ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಕಡಲ ತೀರದಲ್ಲಿ ಉತ್ತರಕಾಶಿ ಸುರಂಗದ ಮರಳು ಶಿಲ್ಪಾಕೃತಿ ನಿರ್ಮಿಸಿ, ಕಾರ್ಮಿಕರಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಮಧ್ಯೆ ರಕ್ಷಣಾ ತಂಡದ ಅಧಿಕಾರಿಗಳು ಕಾರ್ಮಿಕರಿಗೆ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವುದರೊಂದಿಗೆ ಎಂಡೋಸ್ಕೋಪಿಕ್ ಫ್ಲೆಕ್ಸಿ ಕ್ಯಾಮೆರಾವನ್ನು ಸುರಂಗದೊಳಗೆ ಕಳುಹಿಸಿ ಅಲ್ಲಿನ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.