ಹೈದರಾಬಾದ್: ತೆಲಂಗಾಣದ ಜನತೆ ಕಾಂಗ್ರೆಸ್ ನೀಡಿದ ಪೊಳ್ಳು ಗ್ಯಾರಂಟಿಗಳಿಗೆ ಮರುಳಾಗಬಾರದು. ಕರ್ನಾಟಕದಲ್ಲಿ ಇಂಥದ್ದೇ ಉಚಿತಗಳನ್ನು ಘೋಷಿಸಿ ಜಾರಿ ಮಾಡಲಾಗದೇ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿರುವ ಅವರು ಹೈದರಾಬಾದ್ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ನೀಡಿದ 5 ಭರವಸೆಗಳು ಕರ್ನಾಟಕದಲ್ಲಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತೆಲಂಗಾಣದ ಜನ ಕಾಂಗ್ರೆಸ್ ಭರವಸೆಗಳನ್ನು ನಂಬಬೇಡಿ ಎಂದು ಮನವಿ ಮಾಡಿದರು. ತೆಲಂಗಾಣದಲ್ಲೂ 6 ಖಾತರಿ ಯೋಜನೆಗಳ ಹೆಸರಿನಲ್ಲಿ ಪಕ್ಷ ಹೊಸ ನಾಟಕ ಆರಂಭಿಸಿದೆ. ತೆಲಂಗಾಣ ಜನತೆ ಇದನ್ನು ನಂಬಿ ಮೋಸ ಹೋಗಬೇಡಿ ಎಂದರು.