►ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ
ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಮೊಯ್ದಿನ್ ಫರ್ಹಾನ್ (17) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಮುಕ್ಕದಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಫರ್ಹಾನ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮೃತ ಬಾಲಕನ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ.