ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್: ವಿಜಯೇಂದ್ರ ಕಿಡಿ

Prasthutha|

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

- Advertisement -

ಸರ್ಕಾರದ ನಿಲುವಿಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ವಿಜಯೇಂದ್ರ, ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗ ಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ಸದಸ್ಯ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದುಕೊಳ್ಳುವ ನಿಲುವು ತಳೆದಿರುವುದು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಖಾರವಾಗಿ ಟೀಕಿಸಿದ್ದಾರೆ.ಈ ಕ್ರಮವು ನ್ಯಾಯದ ಅನ್ವೇಷಣೆಯನ್ನು ಗಂಭೀರವಾಗಿ ದುರ್ಬಲಗೊಳಿಸುವುದಲ್ಲದೆ, ಡಿಕೆ ಶಿವಕುಮಾರ್ ವಿರುದ್ಧದ ಗಂಭೀರ ಆರೋಪಗಳನ್ನು ಪರಿಹರಿಸುವಲ್ಲಿ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಹಾಳುಮಾಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.



Join Whatsapp