ಕಲಬುರಗಿ: ಅಕ್ಟೋಬರ್ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯೋಜಿಸಿದ್ದ ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆರ್ ಡಿ ಪಾಟೀಲನನ್ನು ಮತ್ತೆ 14 ದಿನಗಳ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ಪೊಲೀಸ್ ಕಸ್ಟಡಿಯ ಅವಧಿ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.