ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರುನೇಮಕ

Prasthutha|

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಚರ್ಚೆ ಬೆನ್ನಲ್ಲೇ ಇದೀಗ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕಾತಿ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಅಂದರೆ 2024 ಜನವರಿ 31ರವರೆಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಮರುನೇಮಕಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಮರುನೇಮಕ ಮಾಡಲಾಗಿದೆ.

- Advertisement -

ಈ ಕುರಿತಾಗಿ ಮೌಖಿಕವಾಗಿ ಮುಂದುವರಿಯುಂತೆ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆಯೇ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ನೀಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಳ್ಳಲಾಗಿದೆ.



Join Whatsapp