ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿ ವಿರುದ್ಧ ವಾಗ್ದಾಳಿ‌ ನಡೆಸಿದ ಯುಪಿ ಸಿಎಂ ಆದಿತ್ಯನಾಥ್

Prasthutha|

ಹೈದರಾಬಾದ್: ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಲಾದ ಮೀಸಲಾತಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್ ಹೇಳಿದ್ದಾರೆ‌.

- Advertisement -

ತೆಲಂಗಾಣದ ಕುಮುರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ಚುನಾವಣೆ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಮುಸ್ಲಿಂ ಮೀಸಲಾತಿ ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಷಡ್ಯಂತ್ರದ ಭಾಗವಾಗಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದುಪಡಿಸುತ್ತದೆ. ಒಬಿಸಿಗಳು, ಎಸ್‌ಸಿ ಮತ್ತು ಎಸ್‌ಟಿಗಳಿಗೆ ಇದರ ಪ್ರಯೋಜನ ನೀಡುತ್ತದೆ ಎಂದು ಹೇಳಿದ್ದಾರೆ.

- Advertisement -

ದಿನಗಳ ಹಿಂದೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಇದೇ ರೀತಿ ಜನರಿಗೆ ಹೇಳಿದ್ದರು. ಈ ಮೂಲಕ ಬಿಜೆಪಿ ತೆಲಂಗಾಣದಲ್ಲಿ ಧರ್ಮ ಆಧಾರಿತ ಚುನಾವಣಾ ಪ್ರಚಾರ ನಡೆಸುತ್ತಿರುವುದು ಸ್ಪಷ್ಟವಾಗಿದೆ.

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ವಾಗ್ದಾಳಿ ನಡೆಸಿದ ಆದಿತ್ಯನಾಥ್, ರಾಜ್ಯ ಸರ್ಕಾರ ಯುವಕರು, ರೈತರು ಮತ್ತು ಮಹಿಳೆಯರಿಗೆ ಚುನಾವಣೆ ಭರವಸೆಗಳನ್ನು ಈಡೇರಿಸದೆ ವಂಚಿಸಿದೆ. ಪ್ರತ್ಯೇಕ ತೆಲಂಗಾಣ ಆಂದೋಲನದ ಮುಖ್ಯ ಯೋಜನೆಯಾದ ‘ನೀರು, ನಿಧಿ ಮತ್ತು ಉದ್ಯೋಗ’ ಒದಗಿಸಲು ಕೆಸಿಆರ್ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.




Join Whatsapp