ವಿಜಯಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧದ ಸಿಬಿಐ ತನಿಖೆಯನ್ನು ಕಾನೂನು ಅನ್ವಯವೇ ಸರ್ಕಾರ ಸಂಪುಟದಲ್ಲಿ ಚರ್ಚಿಸಿ ಹಿಂಪಡೆದಿದೆ. ಈ ವಿಷಯದಲ್ಲಿ ಸಿಬಿಐ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಸಮರ ನಡೆಸೋದಾದರೆ ನಮ್ಮ ಅಭ್ಯಂತರವಿಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್
ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಹೇಳಿದರು.
ರಾಜ್ಯ ಸರ್ಕಾರ ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ, ಕಾನೂನು ಸಲಹೆ ಮೇರೆಗೆ ಸಂಪುಟದಲ್ಲಿ ಚರ್ಚಿಸಿ, ರಾಜಕೀಯ ಪ್ರೇರಿತ ಪ್ರಕರಣವನ್ನು ಹಿಂಪಡೆದಿದೆ ಎಂದರು.
ವಿರೋಧ ಪಕ್ಷಗಳ ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವುದಕ್ಕಾಗಿ ಕೇಂದ್ರ ಸರ್ಕಾರ ಸಿಬಿಐ, ಐಟಿ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಶಿವಕುಮಾರ ವಿರುದ್ಧ ರಾಜಕೀಯ ಷಡ್ಯಂತ್ರದಿಂದ ಕೈಗೊಂಡ ನಿರ್ಧಾರವನ್ನು ನಮ್ಮ ಸರ್ಕಾರ ಕಾನೂನಾತ್ಮಕವಾಗಿ ಹಿಂಪಡೆದಿದೆ ಎಂದರು.