2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ: ಸಿದ್ದರಾಮಯ್ಯ

Prasthutha|

ತೆಲಂಗಾಣ: 2024ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿ ಮತ್ತು ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

- Advertisement -

ಕರ್ನಾಟಕದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಇಲ್ಲ. ಒಂದು ತಿಂಗಳ ಬಳಿಕ ಯುವ ನಿಧಿ ಜಾರಿಯಾದರೆ ನಾವು ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ. ಮುಂದಕ್ಕೆ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.



Join Whatsapp