ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ ಬಿ.ದಯಾನಂದ್

Prasthutha|

ಬೆಂಗಳೂರು: ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

- Advertisement -


ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.


ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂಧಿಸಿದ್ದು, ಇಬ್ಬರು ಡಾಕ್ಟರ್ ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.



Join Whatsapp