ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಅಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲಿದ್ದ ಪ್ರಕರಣ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ಮುಂದುವರೆಸಬೇಕು ಎಂದು ಯತ್ನಾಳ್ ಪಟ್ಟು ಹಿಡಿದಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು. ಅದರಂತೆ ಈಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.