ನನ್ನೊಂದಿಗೆ ಚರ್ಚಿಸಿ ಸಿಎಂ ಸಮಸ್ಯೆ ಬಗೆಹರಿಸಿದ್ದಾರೆ, ಅಧಿವೇಶನದಲ್ಲಿ ಭಾಗವಹಿಸುತ್ತೇನೆ: ಶಾಸಕ ಬಿ.ಆರ್.ಪಾಟೀಲ್

Prasthutha|

ಬೆಂಗಳೂರು: ತನ್ನ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ತೀವ್ರ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು. ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಮತ್ತೆ ಯಾವುದೇ ಸಮಸ್ಯೆಯಾಗುವುದಿಲ್ಲ. ನನಗೆ ಸಮಾಧಾನ ಆಗಿದೆ. ಸಿದ್ದರಾಮಯ್ಯರ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದರು.



Join Whatsapp