ಡಿಕೆಶಿ ಜೈಲಿಗೆ ಹೋಗೋದು ಫಿಕ್ಸ್: ಈಶ್ವರಪ್ಪ

Prasthutha|

ಹಾವೇರಿ: ಲೋಕಸಭಾ ಚುನಾವಣೆ ಮುಂಚೆ ಅಥವಾ ಚುನಾವಣೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಫಿಕ್ಸ್ ಎಂದು ಕೆ.ಎಸ್. ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಕನಕ ಜಯಂತಿ ಕಾರ್ಯಕ್ರಮದ ನಿಮಿತ್ತ ಹಾವೇರಿಗೆ ಆಗಮಿಸಿದ್ದ ಮಾಜಿ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಿಬಿಐ ತನಿಖೆ ಮುಂದುವರಿಸಲು ಅಭ್ಯಂತರ ಇಲ್ಲ ಎಂದು ಕೋರ್ಟ್ ಹೇಳಿದೆ. ಮೇಲ್ನೋಟಕ್ಕೆ ಡಿಕೆಶಿ ಅಕ್ರಮ ಹಣ ಸಂಪಾದನೆ ಮಾಡಿರೋದು ಬಹಿರಂಗ ಆಗಿದೆ. ನೂರಾರು ಕೋಟಿ ಹಣ ಸಿಕ್ಕಿರೋದು ಇಡೀ ರಾಜ್ಯದ ಜನ ನೋಡಿದ್ದಾರೆ. ಸಿಬಿಐ ತನಿಖೆ ಆಗಿದೆ, ಅವರು ಜೈಲಿಗೆ ಹೋಗೋದ್ರಲ್ಲಿ ಯಾವುದೇ ಸಂಶಯ ಇಲ್ಲ. ಲೋಕಸಭಾ ಚುನಾವಣೆ ಮುನ್ನ ಅಥವಾ ಚುನಾವಣೆಯ ಬಳಿಕ ಡಿಕೆಶಿ ಜೈಲಿಗೆ ಹೋಗೋದು ಖಚಿತ ಎಂದರು.



Join Whatsapp