ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ: ದೇವೇಗೌಡ

Prasthutha|

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

- Advertisement -

ಹೊಳೆನರಸೀಪುರದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡರು ಮಾತನಾಡಿದರು‌. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಕಾಂಗ್ರೆಸ್ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲಿದೆ ಇದೇ ಸಂದರ್ಭ ಹೇಳಿದರು.

ಬಿಜೆಪಿಯೊಂದಿಗೆ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಮಾಡುವಂತಹದ್ದು ಏನೂ ಇಲ್ಲ ಎಂದು ದೇವೇಗೌಡ ಹೇಳಿದರು.

- Advertisement -

ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಇದೇ ವೇಳೆ ಹೆಚ್ಡಿಡಿ ಹೇಳಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಐದು ಕಡೆ ಗೆದ್ದಿತ್ತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಿತು. ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ತಿಳಿಸಿದರು.

ಕಳೆದ ಚುನಾವಣೆಯ ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದಲ್ಲಿ ಎಲ್ಲಾ ಕಡೆ ಗ್ಯಾರೆಂಟಿ ಶುರುವಾಗಿದೆ. ಗ್ಯಾರೆಂಟಿ ಬಗ್ಗೆ ಈಗ ಹೆಚ್ಚು ಮಾತನಾಡೋದಿಲ್ಲ ಎಂದು ಮಾಜಿ ಪ್ರಧಾನಿ ಹೇಳಿದರು.



Join Whatsapp