320 ಕೋಟಿ ರೂ. ಶ್ರೀರಾಮ್ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಉದ್ಘಾಟನೆಗೆ ಸಿದ್ಧ

Prasthutha|

ನವದೆಹಲಿ: ಅಯೋಧ್ಯೆಯಲ್ಲಿ 320 ಕೋಟಿ ವೆಚ್ಚದಲ್ಲಿ ಶ್ರೀರಾಮ್ ವಿಮಾನ ನಿಲ್ದಾಣವನ್ನು ಸರ್ಕಾರ ನಿರ್ಮಿಸುತ್ತಿದೆ. ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗೆ ಬಹುತೇಕ ಸಿದ್ಧವಾಗಿದೆ. ಜನವರಿ 22 ರಂದು ರಾಮ ಮಂದಿರ ಲೋಕಾರ್ಪಣೆ ಮುನ್ನ ಇದನ್ನು ಆರಂಭ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಇಂದು ಬೆಳಿಗ್ಗೆ ಸಿಎಂ ಆದಿತ್ಯನಾಥ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಅವಲೋಕಿಸಿದ್ದಾರೆ. ಬಳಿಕ ಟರ್ಮಿನಲ್ ಕಟ್ಟಡದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನೂ ನಡೆಸಿದ್ದಾರೆ. ವಿಮಾನ ನಿಲ್ದಾಣದ ಉದ್ಘಾಟನೆ, ವಿಮಾನ ಆಗಮಿಸುವ ದಿನಾಂಕ ಮತ್ತು ಪ್ರಯಾಣ ದರವನ್ನು ಶೀಘ್ರದಲ್ಲೇ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿ, ಈ ವಿಮಾನ ನಿಲ್ದಾಣದ ನಿರ್ಮಾಣದಲ್ಲಿ ಅಯೋಧ್ಯೆಯ ಸಾಂಸ್ಕೃತಿಕ ಸಾಮರ್ಥ್ಯವನ್ನು ಪ್ರತಿಬಿಂಬಿಸಲು ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದರು. ಮೊದಲು ಭಾರತೀಯ ವಿಮಾನಯಾನ ಸಂಸ್ಥೆ ಇಂಡಿಗೋ, ದೆಹಲಿ ಮತ್ತು ಅಹಮದಾಬಾದ್‌ ನಗರಗಳಿಂದ ವಿಮಾನಯಾನ ಆರಂಭಿಸಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಗೆ ಪ್ರತಿದಿನ ಮತ್ತು ಅಹಮದಾಬಾದ್‌ಗೆ ವಾರದಲ್ಲಿ ಮೂರು ದಿನ ವಿಮಾನಗಳು ಇರುತ್ತವೆ ಎಂದು ಅಧಿಕಾರಿಗಲು ಮಾಹಿತಿ ನೀಡಿದ್ದಾರೆ.



Join Whatsapp