ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಏಳು ಲಕ್ಷ ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ

Prasthutha|

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಟ್ಟು ಏಳು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಗುರಿ ನಿಗದಿಯಾಗಿದೆ. ವಾರ್ಷಿಕ 1.40 ಲಕ್ಷ ಕೋಟಿ ರೂ.ಗಳಂತೆ ಹೂಡಿಕೆ ಮಾಡಲಾಗುತ್ತೆ. ಹೂಡಿಕೆ ಆಕರ್ಷಣೆಗೆ ಪೂರಕವಾದ ಉಪಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

- Advertisement -

ಭವಿಷ್ಯದ ತಂತ್ರಜ್ಞಾನ, ಸುಧಾರಿತ ತಯಾರಿಕೆ ಕ್ಷೇತ್ರದಲ್ಲಿ ಕರ್ನಾಟಕವನ್ನು ಏಷ್ಯಾದಲ್ಲಿಯೇ ಅತ್ಯುತ್ತಮ ಬಂಡವಾಳ ಹೂಡಿಕೆಯ ತಾಣವನ್ನಾಗಿ ಮಾಡುವ ಮಹತ್ವಾಕಾಂಕ್ಷೆ ಹೊಂದಿದೆ. ಸದ್ಯದ ಹೂಡಿಕೆಮಟ್ಟದಲ್ಲಿ ಶೇ.75ರಷ್ಟು ಹೆಚ್ಚಿಸಬೇಕೆಂಬ ಅಭಿಲಾಷೆಯಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಕೈಗಾರಿಕಾ ಬೆಳವಣಿಗೆ ದರವನ್ನು ಐದು ವರ್ಷಗಳಲ್ಲಿ ಶೇ.15 ರಿಂದ 16ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಪ್ರತಿ ವರ್ಷ 80 ಸಾವಿರ ಕೋಟಿ ರೂ. ಮೊತ್ತದ ಹೂಡಿಕೆ ಹರಿದುಬರುತ್ತಿದೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದ್ದಾರೆ.

- Advertisement -

ಆದ್ಯತಾ ವಲಯಗಳ ಕಡೆಗೆ ಹೂಡಿಕೆದಾರರನ್ನು ಆಕರ್ಷಿಸಲು, ವಿಶ್ವದರ್ಜೆಯ ಕೈಗಾರಿಕಾ ಸವಲತ್ತು ಒದಗಿಸಲು, ಸರ್ಕಾರ ಹತ್ತಾರು ಕ್ರಮಗಳನ್ನು ಕೈಗೊಂಡಿದೆ. ಶೀಘ್ರವೇ ಹೊಸ ಕೈಗಾರಿಕಾ ನೀತಿಯು ಪ್ರಕಟವಾಗಲಿದೆ. ಈ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ತಜ್ಞರು, ಪ್ರಮುಖರು, ಭಾಗಿದಾರರ ಸಲಹೆ ಹಾಗೂ ಅಭಿಪ್ರಾಯ ಪಡೆಯಲಾಗಿದೆ. ಒಂಭತ್ತು ವಿಷನ್ ಗ್ರೂಪ್‌ಗಳು ಆಯಾ ಕ್ಷೇತ್ರದಲ್ಲಿ ನುರಿತವರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಲಿವೆ ಎಂದು ಸಚಿವರು ವಿವರಣೆ ನೀಡಿದ್ದಾರೆ



Join Whatsapp