ಚಿಕ್ಕಮಗಳೂರು: ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಸಂಬಂಧ 6 ಪೊಲೀಸರ ಮೇಲೆ ಎಫ್ ಐ ಆರ್ ದಾಖಲಾಗಿ ಅವರನ್ನು ಅಮಾನತುಗೊಳಿಸಲಾಗಿದೆ. ಬಳಿಕ ವಕೀಲನ ಮೇಲಿನ ಹಲ್ಲೆ ಖಂಡಿಸಿ ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.
ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವೇಳೆ ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶನಿವಾರ ಮಧ್ಯರಾತ್ರಿವರೆಗೂ ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಹಾಗೂ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ನಡೆಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಸಲಾಗಿದೆ.