ತೆಲಂಗಾಣ: ಕಾಂಗ್ರೆಸ್ ಎದುರು ಸಿಎಂ ಕೆ ಚಂದ್ರಶೇಖರ್ ರಾವ್‌ಗೆ ತೀವ್ರ ಹಿನ್ನಡೆ

Prasthutha|

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಡುತ್ತಿದ್ದು, ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತಮ್ಮ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಸಾಧಿಸಿದ್ದಾರೆ.ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಎ ರೇವಂತ್ ರೆಡ್ಡಿ ಕಾಮರೆಡ್ಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) 16 ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಎಂಐಎಂ ಒಂದರಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ಕೊಡಂಗಲ್ ಕ್ಷೇತ್ರದಲ್ಲೂ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಕೆಸಿಆರ್ ಗಜ್ವೆಲ್‌ನಲ್ಲಿಯೂ ಸ್ಪರ್ಧಿಸುತ್ತಿದ್ದು, ಗಜ್ವೆಲ್‌ನಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸಿಎಂ ಕೆ.ಸಿ.ಆರ್ ಸಂಪುಟದ 6 ಸಚಿವರಿಗೂ ಭಾರಿ ಹಿನ್ನಡೆಯಾಗಿದೆ. ಸಚಿವರಾದ ಕೆ.ಟಿ.ರಾಮರಾವ್, ಎರಬೆಲ್ಲಿ, ಇಂದ್ರಕಿರಣ್ ರೆಡ್ಡಿ, ಕೊಪ್ಪುಲ ಈಶ್ವರ, ಪುವ್ವಾಡ ಅಜಯ್, ನಿರಂಜನ್ ರೆಡ್ಡಿ, ಪ್ರಶಾಂತ್ ರೆಡ್ಡಿಗೆ ತೀವ್ರ ಹಿನ್ನಡೆಯಾಗಿದೆ.

- Advertisement -

ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿರುವ ಬಿಜೆಪಿಯ ಈಟಲ ರಾಜೇಂದ್ರ ಕೂಡ ಹಿನ್ನಡೆಯಲಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಬಹುತೇಕ ನಿಚ್ಚಳವಾಗಿದ್ದು, ಹೈದರಾಬಾದ್ ನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

2018ರಲ್ಲಿ 119 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಬಿಆರ್ಎಸ್ 88 ಸ್ಥಾನಗಳನ್ನು ಪಡೆದಿತ್ತು.



Join Whatsapp