ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ FIR

Prasthutha|

ಬೆಂಗಳೂರು: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಿರುದ್ಧ CBI ಎಫ್ ಐಆರ್ ದಾಖಲಿಸಿದೆ. ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಲೋನ್ ಪಡೆದು ವಂಚನೆ ಮಾಡಿರುವ ಆರೋಪದ ಹಿನ್ನೆಲೆ ಎಲ್ ಆರ್ ಶಿವರಾಮೇಗೌಡ ಸೇರಿ ಏಳು ಮಂದಿ ವಿರುದ್ಧ ಕೇಸ್ ಹಾಕಲಾಗಿದೆ.

- Advertisement -

ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಶಿವರಾಮೇಗೌಡ, ಪತ್ನಿ ಸುಧಾ, ಮಗ ಚೇತನ್ ಗೌಡ, ಶಿವರಾಮೇಗೌಡ ಸೊಸೆ ಹಾಗೂ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದೆ.



Join Whatsapp