ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

Prasthutha|

ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ದಾಳಿ

- Advertisement -

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

- Advertisement -

ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕ ದಾಳಿ

ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ. ಡಾ ಪ್ರಭಲಿಂಗ ಮಾನಕರ್ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ.



Join Whatsapp