ಮೂರು ರಾಜ್ಯಗಳಲ್ಲಿ ಸೋಲು; ಚಿಪ್ ಹೊಂದಿರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು: ದಿಗ್ವಿಜಯ್ ಸಿಂಗ್

Prasthutha|

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ವಿಧಾನಸಭೆ ಚುನಾವಣೆಗಳಲ್ಲಿ ಸೋಲಿನ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆಯನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮಗದೊಮ್ಮೆ ಪ್ರಶ್ನೆ ಮಾಡಿದ್ದಾರೆ.

- Advertisement -

‘ಚಿಪ್ ಹೊಂದಿರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು. 2003ರಿಂದಲೇ ಇವಿಎಂ ಮೂಲಕ ಮತದಾನವನ್ನು ನಾನು ವಿರೋಧಿಸುತ್ತಲೇ ಬಂದಿದ್ದೇನೆ’ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿರುವ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ‘ಭಾರತೀಯ ಪ್ರಜಾಪ್ರಭುತ್ವವನ್ನು ವೃತ್ತಿಪರ ಹ್ಯಾಕರ್ ಗಳಿಂದ ನಿಯಂತ್ರಿಸಲು ಅನುಮತಿಸಬಹುದೇ! ಇದು ಎಲ್ಲ ರಾಜಕೀಯ ಪಕ್ಷಗಳು ಗಮನಹರಿಸಬೇಕಾದ ಮೂಲಭೂತ ಪ್ರಶ್ನೆಯಾಗಿದೆ. ಚುನಾವಣಾ ಆಯೋಗ ಮತ್ತು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ದಯವಿಟ್ಟು ನಮ್ಮ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುವೀರಾ’ ಎಂದು ಮನವಿ ಮಾಡಿದ್ದಾರೆ.



Join Whatsapp