ಜೈಪುರ: ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ರಾಜ್ಯಾಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಸ್ಕೂಟರ್ ನಲ್ಲಿ ಬಂದ ಇಬ್ಬರು ಯುವಕರು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಸುಖದೇವ್ ಸಿಂಗ್ ಅವರಿಗೆ ಎರಡು ಗುಂಡುಗಳು ತಗುಲಿದ್ದವು. ತಕ್ಷಣ ಅವರನ್ನು ಮಾನಸ ಸರೋವರದಲ್ಲಿರುವ ಮೆಟ್ರೋ ಮಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವೈದ್ಯರು ಚಿಕಿತ್ಸೆ ಆರಂಭಿಸಿದ್ದು, ಸ್ವಲ್ಪ ಸಮಯದ ನಂತರ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಸುಖದೇವ್ ಸಿಂಗ್ ಗೊಗಮೇಡಿ ಹತ್ಯೆ ನಂತರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.