ಶಿವಮೊಗ್ಗ: ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಪೋಷಕರು, ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

Prasthutha|

ಶಿವಮೊಗ್ಗ: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಘಶ್ರೀ(17) ಎಂಬುವವರು ಅನುಮಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

- Advertisement -

ದ್ವಿತೀಯ ಪಿಯುಸಿ ವಿಜ್ಷಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಮೇಘಶ್ರೀಗೆ ಇಂದು ವಾರದ ಪರೀಕ್ಷೆಗಳಿದ್ದವು. ಈ ನಡುವೆ ವಾಶ್ ರೂಂಗೆಂದು ಹೋಗುವುದಾಗಿ ಹೇಳಿದ ವಿದ್ಯಾರ್ಥಿನಿಯು ತಲೆಗೆ ಬಲವಾಗಿ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ. ಈ ಘಟನೆಯಿಂದ ಕಾಲೇಜಿನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕಾಲೇಜಿನಲ್ಲಿ ಈ ಘಟನೆ ಬಳಿಕ ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಮೃತ ವಿದ್ಯಾರ್ಥಿನಿ ಪೋಷಕರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ‘ಕಾಲೇಜಿನ ಫ್ಲೆಕ್ಸ್ ಹರಿದು ಮೃತ ವಿದ್ಯಾರ್ಥಿನಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿನಿ ಪೋಷಕರು, ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಕಾಲೇಜಿನ ಪ್ರಾಂಶುಪಾಲ ಗುರುರಾಜ್ ಸ್ಪಷ್ಟೀಕರಣ ನೀಡಿದ್ದು, ‘ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಗಾಯವಾಗಿತ್ತು. ಬಳಿಕ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಳು. ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ವಿದ್ಯಾರ್ಥಿನಿಯು ಸಾವು ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದಿದ್ದರು.



Join Whatsapp