ಭುವನೇಶ್ವರ: ಒಡಿಶಾದಲ್ಲಿ ಆದಾಯ ತೆರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ವಂಚಿಸಿದ ಆರೋಪದ ಮೇಲೆ ಎರಡು ಮದ್ಯ ತಯಾರಿಕೆ ಮತ್ತು ಮಾರಾಟ ಕಂಪನಿಗಳ ಮೇಲೆ ದಾಳಿ ಮಾಡಿ 300 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡಿದೆ.
ಮದ್ಯ ತಯಾರಿಕಾ ಕಂಪನಿಗೆ ಸಂಬಂಧಿಸಿದ ಬೌಧ್, ಬಲಂಗೀರ್, ರಾಯಗಡ ಮತ್ತು ಸಂಬಲ್ಪುರದಲ್ಲಿನ ತಾಣಗಳ ಮೇಲೆ ದಾಳಿಗಳನ್ನು ನಡೆಸಲಾಯಿತು.
ರಾಜ್ಯದ ಹಲವು ಪ್ರದೇಶಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.