ಬೆಳಗಾವಿ: ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ತಿಳಿಸಿದರು.
ಸಾವರ್ಕರ್ ಭಾವಚಿತ್ರ ತೆಗೆಯಬೇಕೇ ಎಂಬ ಬಗ್ಗೆ ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು. ಈ ಬಗ್ಗೆ ಮಾತನಾಡಿದ ಅವರು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ನಮಗೆ ಬಂದಿಲ್ಲ. ಬಂದರೆ ಆವಾಗ ನೋಡೋಣ, ಈಗಲೇ ಬ್ಯಾಟ್ ಬೀಸಿದ್ರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ. ನನಗೆ ಸಚಿವರೂ ಒಂದೇ, ಪ್ರತಿಪಕ್ಷದವರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುವೆ ಎಂದು ಹೇಳಿದ್ದಾರೆ.