ಕೇಂದ್ರದಿಂದ ಜಿಎಸ್‍ಟಿ ಪರಿಹಾರ 40 ಸಾವಿರ ಕೋಟಿ ರೂ. ಕಡಿಮೆಯಾಗಿದೆ: ಕೃಷ್ಣ ಭೈರೇಗೌಡ

Prasthutha|

ಬೆಳಗಾವಿ: ಕಳೆದ ಐದು ವರ್ಷಗಳಿಂದ ಕೇಂದ್ರ ಸರ್ಕಾರದ ಯೋಜನೆ ಹಾಗೂ ಜಿಎಸ್‍ಟಿ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ 40 ಸಾವಿರ ಕೋಟಿ ರೂ. ಅನುದಾನ ಕಡಿಮೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.

- Advertisement -

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಭೈರೇಗೌಡ ಉತ್ತರಿಸಿದರು. ನಮ್ಮ ರಾಜ್ಯದ ಬಜೆಟ್ ಗಾತ್ರ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ತೆರಿಗೆ ಪಾಲು ಹೆಚ್ಚಳವಾಗಿದೆ. ಆದರೆ, ಬಜೆಟ್ ಗಾತ್ರಕ್ಕೆ ಹೋಲಿಕೆ ಮಾಡಿದರೆ, ಕೇಂದ್ರದಿಂದ 5 ವರ್ಷಗಳಲ್ಲಿ ಸು.40 ಸಾವಿರ ಕೋಟಿ ರೂ. ಅನುದಾನ ಕಡಿತವಾಗಿದೆ. ಇದರಿಂದಾಗಿ ದರಿಂದ ನಮ್ಮ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ ಎಂದಿದ್ದಾರೆ.


ಕೇಂದ್ರ ಪುರಸ್ಕøತ ಯೋಜನೆಯಿಂದ 20 ಸಾವಿರ ಕೋಟಿ ರೂ. ಹಾಗೂ ಜಿಎಸ್‍ಟಿ ಪರಿಹಾರವಾಗಿ 20 ಸಾವಿರ ಕೋಟಿ ರೂ. ರಾಜ್ಯಕ್ಕೆ ಬರಬೇಕೆಂದು ವಿವರಣೆ ನೀಡಿದ ಸಚಿವರು, ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಪಾಲು ಕಡಿಮೆಯಾಗುತ್ತಿದೆಯೇ ಹೊರತು ಹೆಚ್ಚಳವಾಗುತ್ತಿಲ್ಲ. ನಮ್ಮ ಪಾಲು ಮಾತ್ರ ಹೆಚ್ಚಾಗುತ್ತಲೇ ಇದೆ ಎಂದು ಹೇಳಿದರು.

- Advertisement -



Join Whatsapp