ತೆಲಂಗಾಣ: ಮೊದಲ ದಿನವೇ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ ರೇವಂತ್ ರೆಡ್ಡಿ

Prasthutha|

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೇವಂತ್ ರೆಡ್ಡಿ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ್ದಾರೆ.

- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಮೊದಲ ದಿನವೇ ಆರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಚುನಾವಣಾ ಪ್ರಚಾರದ ವೇಳೆ ರೇವಂತ್ ರೆಡ್ಡಿ ಘೋಷಣೆ ಮಾಡಿದ್ದರು. ಅದರಂತೆ 6 ಗ್ಯಾರಂಟಿಗಳ ಜಾರಿ ಪ್ರಕ್ರಿಯೆಗೆ ಮೊದಲ ದಿನವೇ ಚಾಲನೆ ನೀಡಿದ್ದಾರೆ.

ಮಹಾಲಕ್ಷ್ಮಿ: ಪ್ರತಿ ತಿಂಗಳು ಮನೆಯ ಯಜಮಾನಿಗೆ ₹2,500, ರೂ. ₹500ಕ್ಕೆ ಗ್ಯಾಸ್ ಸಿಲಿಂಡರ್, ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

- Advertisement -

ರೈತ ಭರೋಸಾ: ಪ್ರತಿ ವರ್ಷ ರೈತರಿಗೆ, ಗೇಣಿದಾರ ರೈತರಿಗೆ ಎಕರೆಗೆ ₹15,000, ಕೃಷಿ ಕಾರ್ಮಿಕರಿಗೆ ವರ್ಷಕ್ಕೆ ₹12,000,ಭತ್ತದ ಬೆಳೆಗೆ ವರ್ಷಕ್ಕೆ ₹500 ಬೋನಸ್

ಗೃಹ ಜ್ಯೋತಿ: ಈ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್

ಇಂದಿರಮ್ಮ ಇಂಡ್ಲು: ಎಲ್ಲಾ ತೆಲಂಗಾಣ ಚಳುವಳಿ ಹೋರಾಟಗಾರರಿಗೆ ವಸತಿ, ಸ್ವಂತ ಮನೆ ಇಲ್ಲದವರಿಗೆ ಮನೆ, ನಿವೇಶನ ಮತ್ತು ಬಡವರಿಗೆ ಮನೆ ನಿರ್ಮಾಣಕ್ಕೆ ₹5 ಲಕ್ಷ

ಯುವ ವಿಕಾಸಂ: ವಿದ್ಯಾರ್ಥಿಗಳಿಗೆ ₹5 ಲಕ್ಷ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್, ಪ್ರತಿ ಮಂಡಲದಲ್ಲಿ ತೆಲಂಗಾಣ ಅಂತಾರಾಷ್ಟ್ರೀಯ ಶಾಲೆಗಳನ್ನು ಸ್ಥಾಪಿಸುವುದು

ಚೇಯುತ: ಹಿರಿಯ ನಾಗರಿಕರಿಗೆ ₹4,000 ಮಾಸಿಕ ಪಿಂಚಣಿ, ರಾಜೀವ್ ಆರೋಗ್ಯಶ್ರೀ ವಿಮೆಯಡಿ ₹10 ಲಕ್ಷದ ವಿಮೆ



Join Whatsapp