ಪುತ್ತೂರು: ನಾಪತ್ತೆಯಾಗಿದ್ದ ಯುವಕ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

Prasthutha|

ಪುತ್ತೂರು: ಕುಂಬ್ರದಲ್ಲಿ ಟಿಪ್ಪರ್‌ ಚಾಲಕನಾಗಿದ್ದ ಬಾಗಲಕೋಟೆ ಜಿಲ್ಲೆಯ ಯುವಕನೋರ್ವ ನಾಪತ್ತೆಯಾಗಿದ್ದರು. ಇಪ್ಪತ್ತು ದಿನಗಳ ಹಿಂದೆ ಮೂವರು ಕರೆದುಕೊಂಡು ಹೋಗಿದ್ದು ಪ್ರಕರಣ ದಾಖಲಾಗಿತ್ತು. ಆದರೆ ನಾಪತ್ತೆ ಪ್ರಕರಣವೀಗ ಕೊಲೆಯಲ್ಲಿ ಅಂತ್ಯ ಕಂಡಿದೆ.

- Advertisement -

ಕುಂಬ್ರದ ಮಾತೃಶ್ರೀ ಅರ್ಥ್ ಮೂವರ್ ಸಂಸ್ಥೆಯಲ್ಲಿ ಟಿಪ್ಪರ್‌ ಡ್ರೈವರ್‌ ಆಗಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (22) ಕೊಲೆಯಾದ ಯುವಕ.

ಆತನ ಮೃತದೇಹ ಆಗುಂಬೆ ಘಾಟ್‌ನ ಮೂರನೇ ತಿರುವಿನಲ್ಲಿ ಪತ್ತೆಯಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.

- Advertisement -

ಕೊಲೆಗೀಡಾದ ಹನುಮಂತ ಮಾದಾರನೂ ಆರೋಪಿಗಳಲ್ಲಿ ಓರ್ವನಾಗಿರುವ ಶಿವಪ್ಪ ಎಂಬಾತನ ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.



Join Whatsapp