ಬೆಂಗಳೂರು: 16 ಕಂಪನಿಗಳೊಂದಿಗೆ 1275 ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ರೂ. 1,275 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೇ.70ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.
3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿ ಭೂಮಿ, ನೀರು, ವಿದ್ಯುತ್ ಪೂರೈಕೆ ಮತ್ತು ಮೂಲಸೌಕರ್ಯಗಳಿಗೆ ಅನುಮೋದನೆ ನೀಡಿದೆ. ಮುಂದಿನ 3 ವರ್ಷಗಳಲ್ಲಿ ಎಲ್ಲ ಯೋಜನೆಗಳೂ ಅನುಷ್ಠಾನಗೊಳ್ಳಲಿವೆ ಎಂದೂ ಹೇಳಿದ ಸಚಿವರು, ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ಹೇಳಿದರು.