ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಪ್ಯಾಲೇಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ಮಾತುಕತೆ ನಡೆಸಿದ್ದು, ಈ ಸಮಯದಲ್ಲಿ ಜೈಶಂಕರ್ ಪ್ಯಾಲೆಸ್ತೀನ್ ಕುರಿತು ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ. ಟೆಲಿಫೋನಿಕ್ ಸಂಭಾಷಣೆಯ ಸಮಯದಲ್ಲಿ ಮುಹಮ್ಮದ್ ಶ್ತಾಯಿಹ್ ಅವರು ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿನ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಗಾಝಾ ಮತ್ತು ವೆಸ್ಟ್ ಬ್ಯಾಂಕ್ ಎರಡರ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಕುರಿತು ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಲಾಗಿದೆ. ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಳ್ಳಲಾಗಿದೆ ಎಂದು ಜೈಶಂಕರ್ Xನಲ್ಲಿ ಫೋಸ್ಟ್ ಮಾಡಿದ್ದಾರೆ.
ಪ್ಯಾಲೆಸ್ತೀನ್ ಸಮಸ್ಯೆಗೆ ಸಂಬಂಧಿಸಿದಂತೆ ಭಾರತದ ನಿಲುವು ದೀರ್ಘಕಾಲದ ಮತ್ತು ಸ್ಥಿರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅರಿಂದಮ್ ಬಾಗ್ಚಿ ಅಕ್ಟೋಬರ್ 12 ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಅರಿಂದಮ್ ಬಾಗ್ಚಿ, ಭಾರತವು ಯಾವಾಗಲೂ ಇಸ್ರೇಲ್‍ನೊಂದಿಗೆ ಶಾಂತಿಯಿಂದ ಸುರಕ್ಷಿತ ಮತ್ತು ಮಾನ್ಯತೆ ಪಡೆದ ಗಡಿಗಳಲ್ಲಿ ವಾಸಿಸುವ ಪ್ಯಾಲೆಸ್ತೀನ್‍ನ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ರಾಜ್ಯವನ್ನು ಸ್ಥಾಪಿಸುವ ಕಡೆಗೆ ನೇರ ಮಾತುಕತೆಗಳ ಪುನರಾರಂಭವನ್ನು ಪ್ರತಿಪಾದಿಸುತ್ತದೆ. ಆ ಸ್ಥಾನವು ಹಾಗೆಯೇ ಉಳಿದಿದೆ ಎಂದಿದ್ದರು.