ಚಿಕ್ಕಮಗಳೂರು: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ಗಂಭೀರ ಗಾಯವಾಗಿದೆ. ಇನ್ನು ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.