ಶಾಲೆ ಬಳಿಕ ಇದೀಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ: ಹುಸಿ ಎಂದ ಪೊಲೀಸರು

Prasthutha|

ಬೆಂಗಳೂರು: ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

- Advertisement -

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ. ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ಸ್ಕ್ವಾಡ್‌ ಮತ್ತು ಡಾಗ್‌ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಭವನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರೆ ಮಾಡಿರುವವರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.



Join Whatsapp